ಜಮೀನು ವಿವಾದ : ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ಚಿಕ್ಕಬಳ್ಳಾಪುರದ ಸೂಲಿಕುಂಟೆ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಜಮೀನು ವಿವಾದದ ಹಿನ್ನೆಲೆ ಒಂದೇ ಸೀರೆಯಲ್ಲಿ ಗಂಡ, ಹೆಂಡತಿ ಇಬ್ಬರು ನೇಣು ಬಿಗಿದುಕೊಂಡು ಏಕಕಾಲದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.

ಗ್ರಾಮದ ಚಂದ್ರಶೇಖರ್ (32) ಹಾಗೂ ಶಶಿಕಲಾ (25) ಮೃತ ದುರ್ದೈವಿಗಳು. ಮನೆಯಲ್ಲಿನ ಮೇಲ್ಛಾವಣಿಯ ಸಿಮೆಂಟ್ ಶೀಟ್ ಕೆಳಗೆ ಅಡ್ಡಲಾಗಿ ಹಾಕಿರುವ ಕಬ್ಬಿಣದ ಪೈಪ್‍ಗೆ ಒಂದೇ ಸೀರೆಯನ್ನು ಎರಡು ಕಡೆ ನೇತು ಹಾಕಿ ಸೀರೆಯ ಎರಡು ಬದಿಗಳ ಕಡೆ ಒಬ್ಬೊಬ್ಬರು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದೀಗ ಚಿಕ್ಕಬಳ್ಳಾಪುರ  ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ಸಂಬಂಧ ದೂರು ದಾಖಲಾಗಿದೆ.

ಶನಿವಾರ ಸಂಜೆಯಾದರೂ ಮನೆಯಿಂದ ಗಂಡ ಹಾಗೂ ಹೆಂಡತಿ ಹೊರಬಾರದ ಕಾರಣ ಅಕ್ಕ ಪಕ್ಕದ ಮನೆಯವರು ಕಿಟಕಿ ಮೂಲಕ ಇಣುಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮೃತದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಇದನ್ನೂ ಓದಿ : Hescom : ಕಚೇರಿ ಆವರಣದಲ್ಲಿ ನೌಕರ ಆತ್ಮಹತ್ಯೆ

LEAVE A REPLY

Please enter your comment!
Please enter your name here