ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಚಾಲೆಂಜಿಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ನಮ್ಮ ಕರುನಾಡಿನ ಹೆಸರಾಂತ ಕಲಾವಿದೆ ಲೀಲಾವತಿ ಅಮ್ಮನವರು ಇಂದು ಸಾವನ್ನಪ್ಪಿರುವುದು ಇಡೀ ರಾಜ್ಯಕ್ಕೆ ಒಂದು ದುಃಖಕರ ಸಂಗತಿ. ಈ ಮಹಾನ್ ಚೇತನಕ್ಕೆ ಶಾಂತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ. ವಿನೋದ್ ರಾಜ್ ರವರ ಕುಟುಂಬಕ್ಕೆ ಈ ನೋವನ್ನು ತಡೆದುಕೊಳ್ಳುವ ಶಕ್ತಿ ಸಿಗಲಿ
ಎಂದು ನಟ ದರ್ಶನ್ ಅವರು ಸಂತಾಪ ವ್ತಕ್ತಪಡಿಸಿದ್ದಾರೆ.
ಮೇರು ನಟಿ ಶ್ರೀಮತಿ ಲೀಲಾವತಿ ಅವರು ಇಹಲೋಕ ತ್ಯಜಿಸಿದ್ದಾರೆ. ಬಹು ಭಾಷಾ ತಾರೆಯಾಗಿದ್ದ ಅವರ ಕಲಾಸೇವೆ ಅನನ್ಯ. ಲೀಲಾವತಿ ಅಮ್ಮನ ನಿಧನಕ್ಕೆ ಕಂಬನಿ ಮಿಡಿಯುತ್ತೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ
ಎಂದು ಕಿಚ್ಚ ಸುದೀಪ್ ಅವರು ಕಂಬನಿ ಮಿಡಿದಿದ್ದಾರೆ.