ಬೆಂಗಳೂರಿನಲ್ಲಿ ಫೆ.14ರಿಂದ ಮೂರು ದಿನಗಳ ಕಾಲ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶಿಸಿದ್ದಾರೆ.
ಫೆ.14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ಬೆಂಗಳೂರಿನಲ್ಲಿ ನಿಷೇಧ ಮಾಡಲಾಗಿದೆ. ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಿಷೇಧ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಆದೇಶ ಮಾಡಿದ್ದಾರೆ. ಫೆ. 14 ಸಂಜೆ 5 ಗಂಟೆಯಿಂದ ಫೆ.17 ಬೆಳಗ್ಗೆ 6 ಗಂಟೆಯವರಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿಕ್ಷಕರು ಮತ ಚಲಾಯಿಸಲಿದ್ದು, ಇಲ್ಲಿ ಜ.16 ರಿಂದ ಫೆ.23ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.