ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು ಇದೀಗ ಉಳಿದ ಕ್ಷೇತ್ರಗಳಿನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿ ಕಸರತ್ತು ನಡೆಸುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.
28 ಕ್ಷೇತ್ರಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಪ್ರಧಾನಿ ಮೋದಿ, ಅಮಿತ್ ಶಾ ಅವರು ಪಟ್ಟಿ ಫೈನಲ್ ಮಾಡುತ್ತಾರೆ. ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಗೆ ಟಿಕೆಟ್ ವಿಚಾರ ನನಗೆ ಗೊತ್ತಿಲ್ಲ. ಈ ಬಾರಿ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಮಿಸ್ ಆಗುತ್ತೆ ಎಂಬುದು ನನಗೆ ಗೊತ್ತಿಲ್ಲ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ತೀರ್ಮಾನ ಮಾಡುತ್ತಾರೆ ಎಂದು ಬಿಎಸ್ ವೈ ಸ್ಪಷ್ಟಪಡಿಸಿದರು.