ಬೆಳ್ಳಂ ಬೆಳಿಗ್ಗೆ 9 ಆರ್​ಟಿಓ ಚೆಕ್​ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ದಾಳಿ

ಏಕಕಾಲಕ್ಕೆ ರಾಜ್ಯದ 9 ಕಡೆಗಳ ಅರ್​​ಟಿಓ ಚೆಕ್​ಪೋಸ್ಟ್​​ಗಳ ಮೇಳೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಒಂಭತ್ತು ಜಿಲ್ಲೆಗಳ ಆರ್ ಟಿಓ (RTO) ಚೆಕ್ ಪೋಸ್ಟ್ ಗಳ ಮೇಲೆ ಬೆಳಗ್ಗೆ 4 ಗಂಟೆಯಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಅತ್ತಿಬೆಲೆ, ವಿಜಯಪುರದ ಜಳಲಿ ಪೋಸ್ಟ್, ಬೆಳಗಾವಿಯ ನಿಪ್ಪಾಣಿ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ, ಕೋಲಾರದ ನಂಗ್ಲಿ, ಬಳ್ಳಾರಿ, ಕೊಪ್ಪಳ, ಹೊಸಪೇಟೆ, ಗುಂಡ್ಲುಪೇಟೆ, ಬೀದರ್ ನ ಹುಮನಬಾದ್ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಿದ್ದಾರೆ.

ಇದನ್ನೂ ಓದಿ : Breaking News : ಲೋಕಾಯುಕ್ತಕ್ಕೆ 6 ವರ್ಷಗಳ ನಂತರ ‘ಹೈ ಪವರ್’ – ನಾಳೆಯಿಂದಲೇ ಕಣಕ್ಕೆ

ಚೆಕ್ ಪೋಸ್ಟ್ (Check Post) ಗಳಲ್ಲಿ ಮಧ್ಯವರ್ತಿಗಳು ಹಾಗೂ ಲಂಚಕ್ಕೆ ಬೇಡಿಕೆ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಲೋಕಾಯುಕ್ತ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಬೆಂಗಳೂರು ಹೊರವಲಯದ ಅತ್ತಿಬೆಲೆ ಆರ್ ಟಿಒ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. 2 ವಾಹನಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆ 4 ಗಂಟೆಗೆ ಕಚೇರಿ ಮೇಲೆ ರೈಡ್ ಮಾಡಿದ್ದಾರೆ. ಅತ್ತಿಬೆಲೆ ಆರ್ ಟಿಒ ಕಚೇರಿ ಮೇಲೆ ಹಲವು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಕಚೇರಿ ಒಳಗೆ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.

ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ 20 ಮಂದಿ ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ಇದನ್ನೂ ಓದಿ : ಅಮಿತಾಬ್ ಬಚ್ಚನ್ ಕಾರು ವಶ ಪ್ರಕರಣ: 35 ಲಕ್ಷ ದಂಡ ಹಾಕಿದ ಆರ್​ಟಿಓ

LEAVE A REPLY

Please enter your comment!
Please enter your name here