ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು FIR ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ, ಶಶಿಧರ ಮರಡಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧವೂ ಲೋಕಾಯುಕ್ತ ಪೊಲೀಸರು FIR ದಾಖಲಿಸಿದ್ದಾರೆ.
ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಬಿಡಿಎ ಮಾಜಿ ಆಯುಕ್ತ ಜಿಎಸ್ ಪ್ರಕಾಶ್ ವಿರುದ್ಧವೂ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ವಿವಿಧ ಕಲಂಗಳು ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ದಂಡ ಸಂಹಿತೆ ಮತ್ತು ಅಪರಾಧ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ FIR ದಾಖಲಾಗಿದೆ.
ಮುಖ್ಯಮಂತ್ರಿ ಆಗಿದ್ದ ವೇಳೆ ಯಡಿಯೂರಪ್ಪ ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದಡಿ FIR ದಾಖಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟು ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಸಲ್ಲಿಸಿದ್ದ ಅರ್ಜಿ ಆಧಾರದಲ್ಲಿ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.