ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಲೋಕಾಯುಕ್ತ ದಾಳಿ ವೇಳೆ ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದೆ.
ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿ ರಾಣಿ ಮತ್ತು ಕಂದಾಯ ಅಧಿಕಾರಿ ಗಿರೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪೌತಿ ಖಾತೆ ಮಾಡಿಸುವ ಸಲುವಾಗಿ ಮಂಡ್ಯ ಮೂಲದ ಪ್ರಶಾಂತ್ ಎಂಬವರಿಂದ 2 ಲಕ್ಷ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.
ಮಂಡ್ಯ ಜಿಲ್ಲೆ ಲೋಕಾಯುಕ್ತ DySP ಸುನೀಲ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.