ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಭೆ-ಸಮಾರಂಭ, ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.
ಲೋಕಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆ ಸಾರ್ವಜನಿಕರು ಯಾವುದೇ ಸಭೆ- ಸಮಾರಂಭ ಅಥವಾ ಕಾರ್ಯಕ್ರಮಗಳನ್ನು ನಡೆಸಿದರೆ ಅದಕ್ಕೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
ಜೊತೆಗೆ ಅಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆಗಳನ್ನು ಮಾಡಬಾರದು. ರಾಜಕೀಯ ಪಕ್ಷಗಳ ಬಾವುಟ, ಚಿಹ್ನೆಗಳನ್ನು ಬಳಸಬಾರದು ಹಾಗೂ ಮತಯಾಚಿಸುವುದು ಕೂಡ ಕಾನೂನು ಬಾಹಿರವಾಗಿದೆ.