ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್ ಅವರು ಸ್ಪಷ್ಟಪಡಿಸಿದ್ದಾರೆ.
ಮದ್ದೂರಲ್ಲಿ ಪ್ರತಿಕ್ರಿಯೆ ನೀಡಿದ ಸುಮಲತಾ, ಬಿಜೆಪಿ ಮತ್ತು ಜೆಡಿಎಸ್ ರಾಜ್ಯದಲ್ಲಿ ಮಾಡಿಕೊಂಡಿರುವ ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಸುಮಲತಾ ಅವರು ಕ್ಷೇತ್ರ ಬದಲಾವಣೆ ಮಾಡಿ ಬೆಂಗಳೂರು ಉತ್ತರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೆಲ ತಿಂಗಳಿಂದ ಹರಿದಾಡಿತ್ತು.
ADVERTISEMENT
ADVERTISEMENT