ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಗೆ ಧ್ವನಿವರ್ಧಕ ಬಳಸದಂತೆ ನೀಡಲಾಗಿರುವ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿರುವ ಕರ್ನಾಟಕ ಹೈಕೋರ್ಟ್, ಈ ಸಂಬಂಧ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಮೂರು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.
ಧಾರ್ಮಿಕ ಸ್ಥಳಗಳು, ಪಬ್, ರೆಸ್ಟೋರೆಂಟ್ ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳಿಗೂ ಈ ಆದೇಶ ಅನ್ವಯ ಆಗಲಿದೆ.
ಧ್ವನಿ ವರ್ಧಕಗಳ ದುರ್ಬಳಕೆ ತಡೆಗೆ ಸರ್ಕಾರ ಅಭಿಯಾನ ಕೈಗೊಳ್ಳಬೇಕು ಮತ್ತು ಅನುಮತಿಯನ್ನು ನೀಡಬಾರದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ಪೀಠ ಸೂಚಿಸಿದೆ.
ಧ್ವನಿವರ್ಧಕ ಬಳಕೆಗೆ ತಡೆಕೋರಿ 2021ರಲ್ಲಿ ರಾಕೇಶ್ ಪಿ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.