ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದೆ. ದಿನನಿತ್ಯದ ದಿನಸಿ/ಸಾಮಾನುಗಳು ಬೆಲೆ ಹೆಚ್ಚಳದ ನಡುವೆಯೇ ಸಿಲಿಂಡರ್ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿದೆ.
ಈಗಾಗಲೇ ದುಬಾರಿ ಬೆಲೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇಂಧನ ಕಂಪನಿಗಳು ಮತ್ತೊಂದು ಶಾಕ್ ನೀಡಿವೆ. ಗೃಹಬಳಕೆಯ 14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ ಇಂದು ಮತ್ತೆ ಬರೋಬ್ಬರಿ 50 ರೂ. ಏರಿಕೆಯಾಗಿದೆ. 14.2 ಕೆಜಿ ಎಲ್ಪಿಜಿ ಸಿಲಿಂಡರ್ನ ದೇಶೀಯ ಬೆಲೆ ರೂ.50ರಷ್ಟು ಏರಿಕೆಯಾಗಿದೆ.
ಸಣ್ಣ ಸಿಲಿಂಡರ್ 18 ರೂ.ಗಳಷ್ಟು ಹೆಚ್ಚಾಗಿದೆ. ಆದಾಗ್ಯೂ, ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವ ವಾಣಿಜ್ಯ ಎಲ್ಪಿಜಿ ಬೆಲೆ ಸ್ವಲ್ಪ ಕಡಿಮೆಯಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.8.50 ಇಳಿಕೆಯಾಗಿದೆ.