ದೇಶದಲ್ಲಿ ಗ್ಯಾಸ್ ಸಿಲಿಂಡರ್ನ ಬೆಲೆ ಮತ್ತೆ ಹೆಚ್ಚಳವಾಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ದರ ಪ್ರತಿ ಸಿಲಿಂಡರ್ಗೆ 25 ರೂಪಾಯಿಯಷ್ಟು ಹೆಚ್ಚಳವಾಗಿದೆ.
ಫೆಬ್ರವರಿಯಲ್ಲೂ ವಾಣಿಜ್ಯ ಬಳಕೆಯ ಸಿಲಿಂಡರ್ ದರ 19 ರೂಪಾಯಿ ಹೆಚ್ಚಳವಾಗಿತ್ತು.
ಡಿಸೆಂಬರ್ನಲ್ಲೂ 21 ರೂಪಾಯಿಯಷ್ಟು ಹೆಚ್ಚಳವಾಗಿತ್ತು. ಆದರೆ ಜನವರಿಯಲ್ಲಿ ತೈಲ ಕಂಪನಿಗಳು ಸಿಲಿಂಡರ್ಗೆ 39 ರೂಪಾಯಿಯಷ್ಟು ಇಳಿಕೆ ಮಾಡಿದ್ದವು.