ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ಕೋರ್ಟ್ನಲ್ಲಿ ಗ್ಯಾಂಗ್ಸ್ಟರ್ವೊಬ್ಬನನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಕೊಂದಿದ್ದಾರೆ.
ಲಕ್ನೋ ಸಿವಿಲ್ ಕೋರ್ಟ್ ನಲ್ಲಿ ದುಷ್ಕರ್ಮಿಗಳು ಗ್ಯಾಂಗ್ಸ್ಟರ್ ಸಂಜೀವ್ ಜೀವ ಎಂಬವನ್ನು ಕೊಂದು ಹಾಕಿದ್ದಾರೆ.
ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ತಲೆಗೆ ಗಂಭೀರ ಗಾಯವಾಗಿದೆ.
ವಕೀಲರ ಧಿರಿಸಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎರಡು ತಿಂಗಳ ಹಿಂದೆಯಷ್ಟೇ ಪೊಲೀಸರ ಸಮ್ಮುಖದಲ್ಲಿ ಅತೀಕ್ ಅಹ್ಮದ್ನನ್ನು ಗ್ಯಾಂಗ್ಸ್ಟರ್ಗಳು ಗುಂಡಿಕ್ಕಿ ಕೊಲೆ ಮಾಡಿದ್ದರು.
ADVERTISEMENT
ADVERTISEMENT