ಮಧುಗಿರಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಮಧುಗಿರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪಟ್ಟಣದ ದಂಡಿ ಮಾರಮ್ಮ ದೇವಸ್ಥಾನದ ಹಿಂಭಾಗ ಕಸಬಾ ಹೋಬಳಿ ಬಸವನಹಳ್ಳಿ ನಿವಾಸಿ ಅಶ್ವಿನಿ ಬಿ ಹನುಮಂತರಾಯಪ್ಪ (20) ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ ಬೆಳಿಗ್ಗೆ ಕಾಲೇಜಿಗೆ ಹೋಗಿದ್ದರೂ, ಮರಳಿ ಮನೆಗೆ ಬಂದಿರಲಿಲ್ಲ. ಮನೆಯವರು ರಾತ್ರಿಯವರೆಗೂ ಹುಡುಕಾಡಿ ಬೆಳಿಗ್ಗೆ ದೂರು ಕೊಡಲು ನಿರ್ಧರಿಸಿದ್ದರು. ಆ ಸಮಯದಲ್ಲಿಯೇ, ಅಶ್ವಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದುಬಂದಿದೆ.

ಅಕ್ಕ ತಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಬರೆದಿದ್ದ ಡೆತ್ ನೋಟ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ನನ್ನ ಮಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಯಾವುದೇ ಪರಿಸ್ಥಿತಿ ಇಲ್ಲ. ಈ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸಿಪಿಐ ಎಂ.ಎಸ್.ಸರ್ದಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here