ಕರ್ನಾಟಕದಲ್ಲಿನ ಸಾಧನೆಯನ್ನು ಕಾಂಗ್ರೆಸ್ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲೂ ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ದೀರ್ಘ ಸಭೆ ನಡೆಯಿತು, ನಮ್ಮ ಆಂತರಿಕ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ನಮಗೆ 136 ಸೀಟು ಸಿಕ್ಕಿತ್ತು. ಮಧ್ಯಪ್ರದೇಶದಲ್ಲಿ ನಮ್ಮ ಆಂತರಿಕ ಸಮೀಕ್ಷೆ ಪ್ರಕಾರ 150 ಸೀಟು ಸಿಗಲಿದೆ
ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ.
ಇದೇ ವರ್ಷದ ಅಂತ್ಯಕ್ಕೆ ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮುಂದಿನ ವರ್ಷದ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ.
ವಿಧಾನಸಭಾ ಚುನಾವಣೆ ಸಂಬಂಧ ಇವತ್ತು ದೆಹಲಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ಮತ್ತು ರಾಹುಲ್ ಗಾಂಧಿ ಒಳಗೊಂಡಂತೆ ಹಲವು ಪ್ರಮುಖರ ಸಭೆ ನಡೆಯಿತು.
2018ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದಿತ್ತಾದರೂ ಆ ಬಳಿಕ ಆಪರೇಷನ್ ಕಮಲ ಮೂಲಕ ಬಿಜೆಪಿ ಅಧಿಕಾರಕ್ಕೇರಿತ್ತು.
ADVERTISEMENT
ADVERTISEMENT