ಮಹಾರಾಷ್ಟ್ರ ರಾಜಕಾರಣದ ಬಿಕ್ಕಟ್ಟಿಗೆ ಬುಧವಾರ ರಾತ್ರಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ ರಾಜೀನಾಮೆ ನೀಡುವ ಮೂಲಕ ತೆರೆಬಿದ್ದಿತ್ತು. ಇದೀಗ ಶಿವಸೇನೆಯ ರೆಬೆಲ್ ಶಾಸಕರ ನಾಯಕ ಏಕನಾಥ್ ಶಿಂಧೆಯವರು ರಾಜ್ಯಪಾಲರ ಮುಂದೆ ಬಿಜೆಪಿಯೊಂದಿಗೆ ಸರ್ಕಾರ ರಚನೆ ಮಾಡುವ ಹಕ್ಕು ಮಂಡನೆ ಮಾಡಿದ್ದಾರೆ.
ಬಿಜೆಪಿಯ ದೇವೇಮದ್ರ ಪಡ್ನವೀಸ್ ಅವರು ಮುಖ್ಯಮಂತ್ರಿ ಸ್ಥಾನವನ್ನು ರೆಬೆಲ್ ಶಾಸಕರ ನಾಯಕ ಏಕನಾಥ್ ಶಿಂಧೆಯವರಿಗೆ ಬಿಟ್ಟುಕೊಟ್ಟಿದ್ದಾರೆ. ತಾವು ಸಚಿವ ಸಂಪುಟದಿಂದ ಹಿಂದೆ ಸರಿದಿದ್ದಾರೆ.
ಇಂದು ಸಾಯಂಕಾಲ 7 ಗಂಟೆಗೆ ಏಕನಾಥ್ ಶಿಂಧೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಬಿಜೆಪಿ ಹಾಗೂ ಶಿವಸೇನಾ ನೇತೃತ್ವದ ಮೈತ್ರಿ ಸರ್ಕಾರ ರಚನೆಗೆ ಅಸ್ತು ಎಂದೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಯವರನ್ನು ಭೇಟಿಯಾಗಿದ್ದ ಏಕನಾಥ್ ಶಿಂಧೆಯವರು 49 ಶಾಸಕರ ಸಹಿಯುಳ್ಳ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಕೆ ಮಾಡಿದ್ದರು.