ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಆರೋಪದ ಮೇಲೆ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಡ್ಯ ಜಿಲ್ಲೆಯ ಮೊಳ್ಳೇದೊಡ್ಡಿ ಕುಮಾರ್ ನೀಡಿರುವ ದೂರು ಆಧರಿಸಿ, ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪುನೀತ್ ಕೆರೆಹಳ್ಳಿಗೆ ಬಂಧನದ ಆತಂಕ ಎದುರಾಗಿದೆ.
ಪುನೀತ್ ಕೆರೆಹಳ್ಳಿ ವಿರುದ್ಧ ವೇಶ್ಯಾವಾಟಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕುಮಾರ್, ಪುನೀತ್ ಕೆರೆಹಳ್ಳಿಗೆ ಬೈದು ವಿಡಿಯೋ ಅಪ್ಲೋಡ್ ಮಾಡಿದ್ದರು. ಈ ಕಾರಣಕ್ಕೆ ಮೇ 23ರ ರಾತ್ರಿ 8 ಗಂಟೆ ಸಮಯದಲ್ಲಿ ಮಳವಳ್ಳಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಕುಮಾರ್ನನ್ನು ಕರೆಸಿಕೊಂಡ ಪುನೀತ್ ಕೆರೆಹಳ್ಳಿ ಹಾಗೂ 15 ಮಂದಿ ಮನಬಂದಂತೆ ಹಲ್ಲೆ ಮಾಡಿದ್ದು, ಹತ್ಯೆಗೆ ಯತ್ನಿಸಿದ್ದರು ಎನ್ನುವ ಆರೋಪ ಕೇಳಿಬಂದಿದೆ.
ಕುಮಾರ್ ದೂರು ಆಧರಿಸಿ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ಐಪಿಸಿ ಕಲಂ 504, 506, 323, 149ಅಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.