ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್​ ಅವರು ಭೇಟಿಯಾದರು.
ಕರ್ನಾಟಕ ವಿಧಾನಸಭೆಯ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ಇದೇ ಮೊದಲ ಬಾರಿಗೆ ಸುಮಲತಾ ಅವರು ಭೇಟಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್​ ಐದರಲ್ಲಿ ಗೆದ್ದಿದೆ. ಕಾಂಗ್ರೆಸ್​ ಬೆಂಬಲಿತ ದರ್ಶನ್​ ಪುಟ್ಟಣಯ್ಯ ಅವರು ಮೇಲುಕೋಟೆಯಲ್ಲಿ ಗೆದ್ದಿದ್ದಾರೆ. ಕೆ ಆರ್​ ಪೇಟೆಯಲ್ಲಷ್ಟೇ ಜೆಡಿಎಸ್​ ಗೆದ್ದಿದೆ.
ಮೇಲುಕೋಟೆಯಲ್ಲಿ ದರ್ಶನ್​ ಪುಟ್ಟಣ್ಣಯ್ಯ ಅವರ ಗೆಲುವಿಗೆ ಸುಮಲತಾ ಅಂಬರೀಶ್​ ಅವರ ಬೆಂಬಲವೂ ಕಾರಣ ಎಂದು ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಡಾ ಇಂದ್ರೇಶ್​ ಅವರು ಬಹಿರಂಗ ಆರೋಪ ಮಾಡಿದ್ದರು.
ಪ್ರಧಾನಿ ಮೋದಿಯವರು ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಉದ್ಘಾಟನೆಗೆ ಬರುವುದಕ್ಕೆ ಮೊದಲು ಸುಮಲತಾ ಅವರು ಬಿಜೆಪಿಗೆ ಬೆಂಬಲ ಸೂಚಿಸಿದ್ದರು ಮತ್ತು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಕೈಗೊಂಡಿದ್ದರು.
ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರನ್ನು ಬೆಂಬಲಿಸಿ ತಪ್ಪು ಮಾಡಿದೆವು ಎಂದು ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯನವರು ಹೇಳಿದ್ದರು.