ಮಂಡ್ಯ: RSS ಕಾರ್ಯಕ್ರಮದಲ್ಲಿ ಮಂಡ್ಯ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆ

ಬಿಜೆಪಿ ಮಾತೃಸಂಘಟನೆ ಆರ್​ಎಸ್​ಎಸ್​ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ಅಧ್ಯಕ್ಷತೆ ವಹಿಸುತ್ತಿರುವುದು ಈಗ ಚರ್ಚೆಗೆ ಕಾರಣವಾಗಿದೆ.

ಮಾರ್ಚ್​ 22ರಂದು ಅಂದರೆ ನಾಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆರ್​ಎಸ್​​ಎಸ್​ ಮಂಡ್ಯ ನಗರದಲ್ಲಿ ಕುವೆಂಪು ಶತಮಾನೋತ್ಸವ ಸರ್ಕಾರಿ ಶಾಲಾ ಆವರಣದಲ್ಲಿ ಯುಗಾದಿ ಉತ್ಸವವನ್ನು ಆಯೋಜಿಸಲಾಗಿದೆ.

ಆರ್​ಎಸ್​ಎಸ್​ ಆಯೋಜಿಸಿರುವ ಈ ಯುಗಾದಿ ಉತ್ಸವದಲ್ಲಿ ಮಂಡ್ಯ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಹೆಚ್​ ಎನ್​ ನಾಗರಾಜು ಅವರು ಅಧ್ಯಕ್ಷತೆ ವಹಿಸಲಿದ್ದಾರೆ.