ರಸ್ತೆಯಲ್ಲಿ ಹೋಗುವ ಒಂಟಿ ಯುವತಿಯರು ಮತ್ತು ಮಹಿಳೆಯರಿಗೆ ಹೆಲ್ಮೆಟ್ ಧರಿಸಿ ಬೈಕ್ನಲ್ಲಿ ಬಂದು ಲೈಂಗಿಕ ಕಿರುಕುಳ ನೀಡ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ಮಂಡ್ಯ ನಗರದ ಕರೆಗೋಡು ಗ್ರಾಮದ ಚಂದ್ರಶೇಖರ್ ಆರಾಧ್ಯ ಬಂಧಿತ ಆರೋಪಿ.
ರಸ್ತೆಯಲ್ಲಿ ನಡೆದುಕೊಂಡು ಹೋಗುವ ಒಂಟಿ ಮಹಿಳೆಯರನ್ನು ಹೆಲ್ಮೆಟ್ ಧರಿಸಿ ಬೈಕ್ನಲ್ಲಿ ಬಂದು ಮೈ ಮುಟ್ಟಿ ಕಿರುಕುಳ ಕೊಟ್ಟು ಹೋಗ್ತಿದ್ದ.
ನಿನ್ನೆ ಸಂಜೆ ಇಂಥದ್ದೇ ಕೃತ್ಯ ಎಸಗಿ ಪರಾರಿಯಾಗಿದ್ದ. ಈತನ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿತ್ತು. ಸಾರ್ವಜನಿಕರು ನೀಡಿದ ದೂರಿನ ಮೇರೆ ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಚಂದ್ರಶೇಖರ್ ಆರಾಧ್ಯನನ್ನು ಬಂಧಿಸಲಾಗಿದೆ.
ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ADVERTISEMENT
ADVERTISEMENT