ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ವಿವಿದೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಯಾಗಿದೆ.
ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ.
ಈ ಕಂಪನದ ಬಗ್ಗೆ ಇನ್ನಷ್ಟೆ ಅಧಿಕೃತವಾಗಿ ತಿಳಿದುಬರಬೇಕಿದೆ.