ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಮಂಗಳೂರು ನಗರದ ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಮಳವೂರು ಗ್ರಾಮದ ಕರಂಬಾರು ನಿವಾಸಿ ಗೋಪಾಲಕೃಷ್ಣ ಅಲಿಯಾಸ್ ಗೋಪಾಲ್( 45) ಬಂಧಿತ ಆರೋಪಿಯಾಗಿದ್ದಾನೆ.
ಈತ ಸಂಚರಿಸುತ್ತಿದ್ದದ್ವಿಚಕ್ರ ವಾಹನದ ಸೀಟಿನ ಅಡಿಭಾಗದಲ್ಲಿ ಬಚ್ಚಿಟ್ಟಿದ್ದ ಸುಮಾರು 7,500 ಮೌಲ್ಯದ ಎಂಒಎಂಎ (ಶ್ರೀನೈಟ್) ಮಾದಕ ವಸ್ತು ಜೊತೆಗೆ 50 ಸಾವಿರ ರೂ. ಮೌಲ್ಯದ ಸ್ಕೂಟರ್, ಸಣ್ಣ ತೂಕದ ತಕ್ಕಡಿಯನ್ನು ವಶಕ್ಕೆ ಪಡೆಯಲಾಗಿದೆ.
ಬಜ್ಪೆ ಪೊಲೀಸರು ಕರಂಬಾರು ಬಳಿ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಆರೋಪಿ ಗೋಪಾಲಕೃಷ್ಣನಿಗೆ ವಾಹನ ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಈ ವೇಳೆ ಆತ ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದಾನೆ.
ಬಳಿಕ ಬೆನ್ನಟ್ಟಿದ ಪೊಲೀಸರು ಆತನನ್ನು ದಸ್ತಗಿರಿ ಮಾಡಿ ಸ್ಕೂಟರ್ ನ್ನು ತಪಾಸಣೆಗೆ ಒಳಪಡಿಸಿದಾಗ ಅದರಲ್ಲಿ ಮಾದಕ ವಸ್ತು ಇರುವುದು ಪತ್ತೆಯಾಗಿದೆ. ಬಳಿಕ ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಆತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ಮೇಲೆ ಈ ಹಿಂದೆ ಮಂಗಳೂರು ಗ್ರಾಮಾಂತರ, ಕಾವೂರು, ಪುತ್ತೂರು ಠಾಣೆಗಳಲ್ಲಿ 4 ಗಾಂಜಾ ಮಾರಾಟ ಮತ್ತು ಕಳವಿಗೆ ಸಂಬಂಧಿಸಿದ ಪ್ರಕರಣಗಳಿವೆ