ಕೊನೆಗೂ ರದ್ದಾದ ಸುರತ್ಕಲ್ ಟೋಲ್ ಗೇಟ್

ಮಂಗಳೂರು: ಸಾರ್ವಜನಿಕರ ವಿರೋಧದ ನಡುವೆಯೂ ಅಕ್ರಮವಾಗಿ ಕಾರ್ಯಚರಿಸುತ್ತಿದ್ದ ಸುರತ್ಕಲ್ ಟೋಲ್ ಗೇಟ್ ಕೊನೆಗೂ ರದ್ದಾಗಿದೆ. ಈ ಮೂಲಕ ಹಲವು ಕಾಲದ ನಾಗರಿಕರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ಈ ಬಗ್ಗೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟ್ವಿಟ್ ಮಾಡಿ, ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಹಾಗೂ ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಟ್ವಿಟ್ ನಲ್ಲಿ ತಿಳಿಸಿದ್ದಾರೆ.