ಮೊದಲ ಹಂತದಲ್ಲಿ 124 ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ಅಂತಿಮಗೊಳಿಸಿರುವ ಕಾಂಗ್ರೆಸ್ ಉಳಿದ 100 ಕ್ಷೇತ್ರಗಳಿಗೂ ಟಿಕೆಟ್ ಅಂತಿಮಗೊಳಿಸುತ್ತಿದೆ.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಬಿಲ್ಲವ ಸಮುದಾಯ ಪದ್ಮರಾಜ್ ರಾಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ಅಂತಿಮಗೊಳಿಸಿದೆ.
ಈ ಕ್ಷೇತ್ರದಿಂದ ಮಾಜಿ ಶಾಸಕ ಜೆ ಆರ್ ಲೋಬೋ ಮತ್ತು ಮಾಜಿ ಎಂಎಲ್ಸಿ ಐವಾನ್ ಡಿಸೋಜಾ ಅವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು.
ಆದರೆ ಈ ಬಾರಿ ಮಂಗಳೂರು ದಕ್ಷಿಣದಲ್ಲಿ ಹೊಸ ಜಾತಿ ಸಮೀಕರಣಕ್ಕೆ ಕೈಹಾಕಿರುವ ಕಾಂಗ್ರೆಸ್ ಪದ್ಮರಾಜ್ ರಾಮಯ್ಯ ಅವರಿಗೆ ಟಿಕೆಟ್ ಅಂತಿಮಗೊಳಿಸಿದೆ.
ಪದ್ಮರಾಜ್ ರಾಮಯ್ಯ ಅವರು ವಕೀಲರು. ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಮತ್ತು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಆಪ್ತರು.
ವಿಶೇಷ ಎಂದರೆ ಪದ್ಮರಾಜ್ ರಾಮಯ್ಯ ಅವರು ಟಿಕೆಟ್ ಬಯಸಿ ಕಾಂಗ್ರೆಸ್ಗೆ ಅರ್ಜಿ ಹಾಕಿಲ್ಲ.
ಆದರೆ ಬಿಲ್ಲವ ಸಮುದಾಯದ ಪ್ರಮುಖರಿಗೆ ಮಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಸ್ವಯಂಪ್ರೇರಿತವಾಗಿ ಟಿಕೆಟ್ ನೀಡಿರುವುದು ಕಾಂಗ್ರೆಸ್ ಬಿಲ್ಲವ ಮತ ಪ್ರಾಬಲ್ಯ ಇರುವ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ ಲಾಭ ಆಗಬಹುದು ಎನ್ನುವ ಲೆಕ್ಕಾಚಾರ.
ಮಂಗಳೂರು ದಕ್ಷಿಣದಲ್ಲಿ ಈ ಬಾರಿ ಪದ್ಮರಾಜ್ ರಾಮಯ್ಯ ಅವರಿಗೆ ಟಿಕೆಟ್ ನೀಡುವಂತೆ ಕ್ರಿಶ್ಚಿಯನ್ ಸಮುದಾಯದವರೇ ಕಾಂಗ್ರೆಸ್ ನಾಯಕರ ಮೇಲೆ ಒತ್ತಡ ಹೇರಿದ್ದರು ಎಂಬ ಮಾಹಿತಿ ಇದೆ.
ಮಂಗಳೂರು ದಕ್ಷಿಣದಲ್ಲಿ ಕಳೆದ ಚುನಾವಣೆಯಲ್ಲಿ ವೇದವ್ಯಾಸ್ ಕಾಮತ್ ಶಾಸಕರಾಗಿ ಆಯ್ಕೆ ಆಗಿದ್ದರು.
ADVERTISEMENT
ADVERTISEMENT