Manipura : ಐವರು ಜೆಡಿಯು ಶಾಸಕರು ಬಿಜೆಪಿಗೆ

Manipura

ಶುಕ್ರವಾರ ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಮಣಿಪುರದ (Manipura) ಐವರು ಜೆಡಿಯು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಬಹುದೊಡ್ಡ ಆಘಾತ ನೀಡಿದ್ದಾರೆ.

ಈ ಕುರಿತು ಮಣಿಪುರ (Manipura) ವಿಧಾನಸಭೆಯ ಕಾರ್ಯದರ್ಶಿ ಕೆ.ಮೇಘಜಿತ್‌ ಸಿಂಗ್‌ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, ಐವರು ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದನ್ನು ಸ್ಪೀಕರ್‌ ಅವರು ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡು ಆರ್​ಜೆಡಿ ಮತ್ತು ಕಾಂಗ್ರೆಸ್ ಜೊತೆ ಕೈಜೋಡಿಸಿರುವ ನಿತೀಶ್​​ ಕುಮಾರ್​ ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಮಾಡಿದ್ದಾರೆ. ಇದರ ಮಧ್ಯೆ ಮಣಿಪುರದಲ್ಲಿ ಐವರು ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ : BIG BREAKING: ಬಿಹಾರ ಸಿಎಂ ನಿತೀಶ್​ ಕುಮಾರ್​ ರಾಜೀನಾಮೆ – ಮಹಾಮೈತ್ರಿ ಕೂಟ ಸರ್ಕಾರಕ್ಕೆ ಹಾದಿ ಸುಗಮ

ಕಳೆದ ಮಾರ್ಚ್​ ತಿಂಗಳಲ್ಲಿ ನಡೆದ ಮಣಿಪುರ ವಿಧಾಸಭೆ ಚುನಾವಣೆಯಲ್ಲಿ ಜೆಡಿಯು 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನಗಳಲ್ಲಿ ಗೆಲುವು ದಾಖಲಿಸಿ ಅಧಿಕಾರ ಉಳಿಸಿಕೊಂಡಿದೆ. ಈ ವೇಳೆ, ಜೆಡಿಯು ಶಾಸಕರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು.

ಕೆ.ಎಚ್. ಜೋಯ್ಕಿಶನ್, ಎನ್.ಸನತೆ, ಎಂಡಿ ಅಚಾಬ್ ಉದ್ದೀನ್, ಮಾಜಿ ಡಿಜಿಪಿ ಎಲ್ ಎಂ ಖೌಟೆ ಮತ್ತು ತಂಗಜಮ್ ಅರುಣ್​ಕುಮಾರ್ ಬಿಜೆಪಿ ಸೇರ್ಪಡೆಯಾಗಿರುವ ಶಾಸಕರಾಗಿದ್ದಾರೆ. ಮಣಿಪುರದಲ್ಲಿ ಸದ್ಯ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ.

ಇದನ್ನೂ ಓದಿ : ಮಣಿಪುರ ಭೂ ಕುಸಿತ : ಸಾವಿನ ಸಂಖ್ಯೆ 24 ಕ್ಕೆ ಏರಿಕೆ – ಇಂದು ಮತ್ತೆ ಭೂಕುಸಿತ

LEAVE A REPLY

Please enter your comment!
Please enter your name here