ಮೇಘಾಲಯದಲ್ಲಿ ರಾಷ್ಟ್ರೀಯ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬಂದಿದೆ.
59 ವಿಧಾನಸಭಾ ಕ್ಷೇತ್ರಗಳಲ್ಲಿ (ಒಟ್ಟು ಕ್ಷೇತ್ರ 60) ಎನ್ಪಿಪಿ 25 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.
ಯುನೈಟೆಡ್ ಡೆಮಾಕ್ರಾಟಿಕ್ ಪಾರ್ಟಿ 11, ತೃಣಮೂಲ ಕಾಂಗ್ರೆಸ್ 5, ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ.
ಕಾಂಗ್ರೆಸ್ 5 ಕ್ಷೇತ್ರಗಳನ್ನು ಗೆದ್ದಿದೆ. ಸ್ವತಂತ್ರರು 2, ಪಿಡಿಎಫ್ 2, ವಿಪಿಪಿ 4 ಕ್ಷೇತ್ರಗಳಲ್ಲಿ ಗೆದ್ದಿದೆ.
2018ರ ವಿಧಾನಸಭಾ ಚುನಾವಣೆಯ ಬಳಿಕ ಕಾರ್ನಡ್ ಸಂಗ್ಮಾ ನೇತೃತ್ವದ ಎನ್ಪಿಪಿ ಮತ್ತು ಬಿಜೆಪಿ ಮೈತ್ರಿ ಸರ್ಕಾರ ರಚಿಸಿಕೊಂಡಿತ್ತು. ಆದರೆ ಈ ಬಾರಿ ಎನ್ಪಿಪಿ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸಿತ್ತು.
ADVERTISEMENT
ADVERTISEMENT