ಮಿಚಾಂಗ್ ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದೀಗ ಕರ್ನಾಟಕದಲ್ಲೂ ಸಹ ಚಂಡಮಾರುತದ ಪ್ರಭಾವ ಬೀರಲಿದೆ. ನಿನ್ನೆಯಿಂದ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಚುಮುಚುಮು ಚಳಿಯಿದ್ದು, ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.