ಒಂದು ತಿಂಗಳೂ ಆಗಿರದ ಸಿಎಂ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಮೊದಲ ಅಘಾತ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಳ್ಳಾರಿ ಉಸ್ತುವಾರಿ ಸಚಿವರೂ ಆಗಿರುವ ಯುವಜನ ಸೇವೆ ಮತ್ತು ಕ್ರೀಡಾ ಮತ್ತು ಪರಿಶಿಷ್ಟ ಕಲ್ಯಾಣ ಖಾತೆ ಸಚಿವ ಬಿ ನಾಗೇಂದ್ರ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶೆ ಜೆ ಪ್ರೀತ್ ಅವರು ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದ್ದಾರೆ.
ಮಾಜಿ ಸಚಿವ ಮತ್ತು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಸೂಚಿಸಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಅನುಮತಿ ಪಡೆಯದೇ ಮತ್ತು ಸರ್ಕಾರಕ್ಕೆ ಶುಲ್ಕ ಪಾವತಿಸದೇ 22.282 ಮೆಟ್ರಿಕ್ ಟನ್ ಕಬ್ಬಿಣದ ಅದಿರು ಮಾರಾಟ ಮಾಡಿದ ಆರೋಪವಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 2 ಕೋಟಿ 81 ಲಕ್ಷ ರೂಪಾಯಿ ನಷ್ಟ ಆಗಿದೆ ಎಂದು ತನಿಖಾಧಿಕಾರಿ ಮಂಜುನಾಥ್ ಅಣ್ಣಿಗೇರಿ ಖಾಸಗಿ ದೂರು ದಾಖಲಿಸಿದ್ದರು
ADVERTISEMENT
ADVERTISEMENT