ADVERTISEMENT
ಹಸಿವು ಮುಕ್ತಕ್ಕಾಗಿ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದ ಕೇಂದ್ರದ ಬಿಜೆಪಿ ಸರ್ಕಾರ ಈಗ ಧರ್ಮದ ಹೆಸರಲ್ಲಿ ಅಕ್ಷತೆಯ ಗಂಟನ್ನು ಮನೆಗೆ ಕಳಿಸುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವ ಡಾ ಹೆಚ್ ಸಿ ಮಹದೇವಪ್ಪ ವ್ಯಂಗ್ಯವಾಡಿದ್ದಾರೆ.
ಹಸಿವು ಮುಕ್ತ ಕರ್ನಾಟಕದ ಉದ್ದೇಶದಿಂದ ಜಾರಿಗೊಳಿಸಿದ್ದ ಅನ್ನಭಾಗ್ಯ ಯೋಜನೆಗೆ ಹೆಚ್ಚಿನ ಹಣ ನೀಡಿ ಕೊಂಡುಕೊಳ್ಳುತ್ತೇವೆ ಎಂದಾಗಲೂ ಕೇಂದ್ರದಿಂದ ಅಕ್ಕಿ ನೀಡದವರು ಈ ದಿನ ಧರ್ಮದ ಹೆಸರಲ್ಲಿ ಅಕ್ಷತೆಯ ಗಂಟನ್ನು ಮನೆ ಮನೆಗೆ ಕಳಿಸುತ್ತಿರುವುದನ್ನು ನೋಡಿದರೆ ಇವರಿಗೆ ಧರ್ಮದ ನೈಜ ಜವಾಬ್ದಾರಿಯ ಬಗ್ಗೆ ತಿಳುವಳಿಕೆ ಇಲ್ಲ ಎಂಬುದು ಸ್ಪಷ್ಟವಾಗಿ ಕಾಣುತ್ತದೆ.
ಬಡವರ ಹಸಿವಿಗೆ ಅನ್ನ ನೀಡುವುದಕ್ಕಿಂತಲೂ ದೊಡ್ಡ ಧರ್ಮ ಈ ಜಗತ್ತಿನಲ್ಲಿ ಯಾವುದಿದೆ?
ಬಡವರ ಹಸಿವಿಗೆ ನೀಡುವ ಅನ್ನದ ವಿಷಯದಲ್ಲೂ ರಾಜಕೀಯ ಮಾಡುವಂತಹ ಅಮಾನವೀಯ ಪ್ರವೃತ್ತಿ ತೋರಿದ ಬಿಜೆಪಿಗರು ಧರ್ಮದ ಕುರಿತಂತೆ ಮಾತನಾಡುತ್ತಿದ್ದರೆ ಅದನ್ನು ಕಂಡು ನಗಬೇಕೋ ಅಳಬೇಕೋ ಎಂದು ನನಗೆ ತಿಳಿಯುತ್ತಿಲ್ಲ!
#ದಯೆಯೇ_ಧರ್ಮ
#ದಾಸೋಹವೇ_ಧರ್ಮ
ಎಂದು ಬಿಜೆಪಿಗೆ ಸಚಿವ ಮಹದೇವಪ್ಪ ಅವರು ಕುಟುಕಿದ್ದಾರೆ.
ADVERTISEMENT