ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ಟ್ವಿಟರ್ ಖಾತೆ ಹ್ಯಾಕ್ ಆಗಿದೆ.
ಶಾಸಕಿ ನಿಂಬಾಳ್ಕರ್ ಅವರ ಟ್ವಿಟರ್ ಖಾತೆ 2 ದಿನಗಳ ಹಿಂದೆ ಹ್ಯಾಕ್ ಆಗಿದೆ. ಈ ಬಗ್ಗೆ ಶಾಸಕಿ ಮಾಹಿತಿ ಹಂಚಿಕೊಂಡಿದ್ದು, ಸಿಇಎನ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇನ್ನು, ನಿನ್ನೆಯಷ್ಟೇ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಯವರ ಖಾತೆ ಹ್ಯಾಕ್ ಆಗಿತ್ತು, ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದ ಅವರು, ನನ್ನ ಟ್ವಿಟರ್ ಖಾತೆ ಹ್ಯಾಕ್ ಹಾಕಿದೆ. ನನ್ನ ಖಾತೆಯಲ್ಲಿ ಅಸಂಬದ್ಧ ಪೋಸ್ಟ್ ಕಂಡುಬಂದರೆ ಅದಕ್ಕೆ ನಾನು ಜವಾಬ್ದಾರನಲ್ಲ ಎಂದು ಹೇಳಿದ್ದರು.
ಗಣ್ಯರ ಟ್ವಿಟರ್ ಖಾತೆ ಹ್ಯಾಕ್ ಆಗುವುದು ಸರ್ವೆಸಾಮಾನ್ಯವಾಗಿದೆ. ಕಳೆದ ವರ್ಷವಷ್ಟೇ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆ ಹ್ಯಾಕ್ ಮಾಡಲಾಗಿತ್ತು. ಅಲ್ಲದೇ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಖಾತೆಯನ್ನೂ ಕಿಲಿಗೇಡಿಗಳು ಹ್ಯಾಕ್ ಮಾಡಿದ್ದರು.