ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಗೆ ಎಂ.ಎನ್.ರಾಜೇಂದ್ರ ಕುಮಾರ್ ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆ

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮತ್ತೊಮ್ಮೆ ಅಧ್ಯಕ್ಷರಾಗಿ ಚುನಾಯಿತರಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷೀಯ ಚುನಾವಣೆಯಲ್ಲಿ ಸಹಕಾರಿ ಧುರೀಣ SCDCC Bank ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮುಂದಿನ 5 ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.

ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಇವರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಕಳೆದ 2 ದಶಕಗಳಿಂದಲೂ ಅಧ್ಯಕ್ಷರಾಗಿದ್ದು, ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಿ. ಇದರ ನಿರ್ದೇಶಕರಾಗಿದ್ದು, ಕರಾವಳಿ ಸಹಕಾರಿ ಕ್ಷೇತ್ರಕ್ಕೆ ಹೆಮ್ಮೆಯಾಗಿರುತ್ತಾರೆ. ಇದನ್ನೂ ಓದಿ : ತುಮಕೂರು: ಹಾಲು ಅಳತೆಯಲ್ಲಿ ಮೋಸ: ರೈತನ ಮೇಲೆ ಡೈರಿ ಕಾರ್ಯದರ್ಶಿ ಹಲ್ಲೆಗೆ ಯತ್ನ

LEAVE A REPLY

Please enter your comment!
Please enter your name here