ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ & ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಸತ್ತಿನಲ್ಲಿ ಒಪ್ಪಿಕೊಂಡಿದೆ.
ಸಂಸತ್ತಿನ ಮೇಲ್ಮನೆ ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಮೋದಿ ಸರ್ಕಾರ ಉತ್ತರ ನೀಡಿದೆ.
ಈ ಬಗ್ಗೆ ಕರ್ನಾಟಕ ಮೂಲದವರೇ ಆದ ಕರ್ನಾಟಕದಿಂದ ರಾಜ್ಯಸಭೆಯನ್ನು ಪ್ರತಿನಿಧಿಸ್ತಿರುವ ಸಂಸದ ಜೈರಾಂ ರಮೇಶ್ ಅವರು ಟ್ವೀಟಿಸಿದ್ದಾರೆ.
ಇಂದು ರಾಜ್ಯಸಭೆಯಲ್ಲಿ ಸರ್ಕಾರ ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ & ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲಿದೆ ಎಂದು ಒಪ್ಪಿಕೊಂಡಿದೆ. ಕಾರ್ಖಾನೆಗೆ ಕಬ್ಬಿಣದ ಅದಿರಿನ ಮೂಲ ಇಲ್ಲಾ ಎಂಬ ಕಾರಣ ನೀಡಿ ಮುಚ್ಚಲಾಗುತ್ತಿದೆ. ರಾಜ್ಯದಲ್ಲಿ ಖಾಸಗಿ ಕಾರ್ಖಾನೆಗಳು ಗಣಿಗಳನ್ನು ಹೊಂದಿದ್ದರೂ SAILಗೆ ಗಣಿ ಇಲ್ಲಾ ಎಂಬುದು ಆಶ್ಚರ್ಯಕರ
ಭದ್ರಾವತಿಯು ಕಬ್ಬಿಣ ಅದಿರು ಸಂಪತ್ಭರಿತ ಬಳ್ಳಾರಿಯಿಂದ ಕೇವಲ 250 ಕಿಮೀ ನಷ್ಟು ಅಂತರದಲ್ಲಿದ್ದರೂ ಈ ಕಾರಣ ನೀಡಲಾಗಿದೆ. ಗಣಿ ಪರವಾನಗಿಯನ್ನು VISLಗೆ ಅಕ್ಟೋಬರ್ 2011ರಲ್ಲಿಯೇ ನೀಡಲಾಗಿದ್ದರೂ, ಈ ಮೋದಿ ಸರ್ಕಾರ ಈವರೆಗೂ ಏನನ್ನೂ ಮಾಡಿಲ್ಲಾ.
ಎಂದು ಜೈರಾಂ ರಮೇಶ್ ಅವರು ಟ್ವೀಟಿಸಿದ್ದಾರೆ.
ADVERTISEMENT
ADVERTISEMENT