ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆಪ್ತ, ಯಡಿಯೂರಪ್ಪ ಅವರ ಕಾನೂನು ಸಲಹೆಗಾರರಾಗಿದ್ದ ಮೋಹನ್ ಲಿಂಬಿಕಾಯಿ ಅವರು ಬಿಜೆಪಿ ಬಿಡುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇವತ್ತು ಸಂಜೆ ಕಾಂಗ್ರೆಸ್ಗೆ ಸೇರ್ಪಡೆ ಆಗಲಿದ್ದಾರೆ.
ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದರ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಬಿಜೆಪಿ ಪಶ್ವಿಮ ಶಿಕ್ಷಕರ ಕ್ಷೇತ್ರದಿಂದ ಟಿಕೆಟ್ ನೀಡಿತ್ತು. ಟಿಕೆಟ್ ಆಕಾಂಕ್ಷಿಯಾಗಿದ್ದ ಲಿಂಬಿಕಾಯಿ ಅವರು ಇದರಿಂದ ಕೆರಳಿದ್ದರು.
ಈ ಬಾರಿ ಕಾಂಗ್ರೆಸ್ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಲಿಂಬಿಕಾಯಿ ಅವರಿಗೆ ಟಿಕೆಟ್ ನೀಡುವುದು ಖಚಿತವಾಗಿದೆ.
ಈ ಕ್ಷೇತ್ರವನ್ನು ಸದ್ಯ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಪ್ರತಿನಿಧಿಸುತ್ತಿದ್ದಾರೆ. ಯಡಿಯೂರಪ್ಪ ಅವರು ಕೆಜೆಪಿ ಕಟ್ಟಿದಾಗ ಮೊದಲು ಬಿಜೆಪಿಗೆ ರಾಜೀನಾಮೆ ಕೊಟ್ಟಿದ್ದೇ ಲಿಂಬಿಕಾಯಿ ಅವರು.
ಆ ಬಳಿಕ ಕೆಜೆಪಿಯಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಕೆಜೆಪಿ ಸೇರುವ ಸಲುವಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೂ ಆಗ ರಾಜೀನಾಮೆ ನೀಡಿದ್ದರು.
ADVERTISEMENT
ADVERTISEMENT