ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನ ಬಾಕಿ ಇರುವ ಹೊತ್ತಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಇವತ್ತು ಬಿಜೆಪಿ ಸೇರಲಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ ತಿಪ್ಪೇಸ್ವಾಮಿ ಅವರು ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡೆದ್ದು ಪಕ್ಷೇತರರಾಗಿ ಸ್ಪರ್ಧೆ ಮಾಡಿ ಸೋತಿದ್ದರು.
ಈ ಬಾರಿ ಮೊಳಕಾಲ್ಮೂರು ಕ್ಷೇತ್ರದಲ್ಲಿ ರಾಮುಲು ಸ್ಪರ್ಧೆ ಮಾಡುತ್ತಿಲ್ಲ, ಈ ಹಿನ್ನೆಲೆಯಲ್ಲಿ ತಿಪ್ಪೇಸ್ವಾಮಿ ಅವರನ್ನು ಬಿಜೆಪಿಗೆ ಮತ್ತೆ ಕರೆತಂದು ಕಣಕ್ಕಿಳಿಸುವುದು ಬಿಜೆಪಿ ಲೆಕ್ಕಾಚಾರ.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ವಿಧಾನಪರಿಷತ್ ಮಾಜಿ ಸದಸ್ಯ, ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಿರುವ ಹಿನ್ನೆಲೆಯಲ್ಲಿ ತಿಪ್ಪೇಸ್ವಾಮಿ ಬಿಜೆಪಿಯತ್ತ ವಾಲಿದ್ದಾರೆ.
2013ರ ವಿಧಾನಸಭಾ ಚುನಾವಣೆಯಲ್ಲಿ ರಾಮುಲು ಅವರ ಪಕ್ಷ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು ತಿಪ್ಪೇಸ್ವಾಮಿ.
ಕಳೆದ ಚುನಾವಣೆಯ ವೇಳೆ ತಿಪ್ಪೇಸ್ವಾಮಿ ಬೆಂಬಲಿಗರು ರಾಮುಲು ಅವರ ಬೆಂಬಲಿಗರ ಮೇಲೆ ಚಪ್ಪಲಿ ಎಸೆದಿದ್ದ ಪ್ರಸಂಗವೂ ನಡೆದಿತ್ತು.
ADVERTISEMENT
ADVERTISEMENT