ದೇಶದಲ್ಲಿ ಮುಂಗಾರು ಆರಂಭವಾಗಿದೆ. ಇವತ್ತು ಕೇರಳಕ್ಕೆ ಮುಂಗಾರು ಮಳೆ ಪ್ರವೇಶವಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇವತ್ತು ಬೆಳಗ್ಗೆ ನೈರುತ್ಯ ಮುಂಗಾರು ಕೇರಳ ರಾಜ್ಯವನ್ನು ಪ್ರವೇಶಿಸಿದ್ದು, ದೇಶದ ಈಶಾನ್ಯ ಭಾಗದ ಪ್ರದೇಶಗಳಿಗೆ ವ್ಯಾಪಿಸಲಿದೆ.
ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 3ರವರೆಗೆ ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗಲಿದೆ.
ಜೂನ್ 2 ಮತ್ತು 3ರಂದು ಉತ್ತರ ಒಳನಾಡು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇವತ್ತು ಮತ್ತು ನಾಳೆ ಸಾಧಾರಣ ಮಳೆಯಾಗಲಿದೆ. ಆದರೆ ಜೂನ್ 1, 2 ಮತ್ತು 3ರಂದು ಭಾರೀ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಬುಧವಾರ ರಾಜ್ಯದ 13 ಜಿಲ್ಲೆಗಳಲ್ಲಿ ಮಳೆಯಾಗಿಲ್ಲ.