ಎರಡ್ಮೂರು ದಿನದಲ್ಲಿ ರಾಜ್ಯಾದ್ಯಂತ ಮುಂಗಾರು ಮಳೆ ಬಿರುಸು

ಇನ್ನು ಎರಡ್ಮೂರು ದಿನಗಳಲ್ಲಿ ಕರ್ನಾಟಕದಾದ್ಯಂತ ಮುಂಗಾರು ಮಳೆ ಆವರಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಚಿತ್ರದುರ್ಗದಿಂದ ಮಳೆಯಾಗುತ್ತಿದೆ. 

ಇನ್ನು ಎರಡ್ಮೂರು ದಿನಗಳಲ್ಲಿ ಇಡೀ ರಾಜ್ಯದಲ್ಲೂ ಮಳೆಯಾಗಲಿದೆ.

ಜೂನ್​ 11ರಿಂದ ಜೂನ್​ 15ರವರೆಗಿನ ಮಳೆ ಅಂದಾಜಿನಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಅಂದಾಜಿದೆ ಎಂದು ಹವಾಮಾನ ಇಲಾಖೆ ಹೇಳಿದೆ.