Moral Policing : ಹಿಂದೂ ಯುವಕನ ಜೊತೆಗಿದ್ದ ಮುಸ್ಲಿಂ ಯುವತಿಯ ಮೇಲೆ ಹಲ್ಲೆ

Moral Policing

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣವೊಂದು ನಡೆದಿದೆ. ಈ ಘಟನೆ ದೊಡ್ಡಬಳ್ಳಾಪುರ ನಗರದ ತೇರಿನ ಬೀದಿಯಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇಸ್ಲಾಂಪುರ ನಿವಾಸಿ ಹುಜೂರು ಹಾಗೂ ತಂಡ ಈ ಕಿರಿಕ್ ಮಾಡಿದೆ. ಬೈಕ್‍ನಲ್ಲಿ ತೆರಳುತ್ತಿದ್ದ ಯುವಕ-ಯುವತಿಯನ್ನ ತಡೆದು ಹಲ್ಲೆ ನಡೆಸಲಾಗಿದೆ. ಮನೆಯವರ ಫೋನ್ ನಂಬರ್ ಕೊಡು ಅಂತ ಯುವತಿ ಮೇಲೆ ದಬ್ಬಾಳಿಕೆ ನಡೆಸಲಾಗಿದೆ. ಫೋನ್ ನಂಬರ್ ಯಾಕೆ ಕೊಡಬೇಕು ಅಂತ ಪ್ರಶ್ನಿಸಿದ್ದಕ್ಕೆ ಯುವತಿ ಮೇಲೆ ಹಲ್ಲೆ ನಡೆಸಲಾಗಿದೆ.

ಸದ್ಯ ದಾಂಧಲೆ ದೃಶ್ಯ ಮೊಬೈಲ್‍ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೂರಿನ ಹಿನ್ನೆಲೆಯಲ್ಲಿ ಅಕ್ಬರ್ ಎಂಬಾತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಪ್ರಕರಣದ ಪ್ರಮುಖ ಆರೋಪಿ ಹುಜೇರ್ ನಾಪತ್ತೆಯಾಗಿದ್ದಾನೆ.

ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ : ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ- 6 ಜನರ ಬಂಧನ