ADVERTISEMENT
ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿರುವ ಹಾಲಿ ಶಾಸಕರಲ್ಲಿ ಕೆಲವರಿಗೆ ಆತಂಕ ಶುರುವಾಗಿದೆ.
ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ 135 ಗೆದ್ದೇ ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದ್ದಾರೆ.
ಈ ನಡುವೆ ಕರ್ನಾಟಕ ಕಾಂಗ್ರೆಸ್ನಲ್ಲಿ ಕೆಲವು ಹಾಲಿ ಶಾಸಕರಿಗೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಆಘಾತ ನೀಡುವ ನಿರೀಕ್ಷೆ. ಕೆಲವು ಹಾಲಿ ಶಾಸಕರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಲ್ಲ ಎನ್ನಲಾಗಿದೆ.
ಸತತವಾಗಿ ಗೆದ್ದು ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಮತ್ತು ವಯಸ್ಸಿನ ಕಾರಣದಿಂದ ಕಾಂಗ್ರೆಸ್ನ ಕೆಲವು ಶಾಸಕರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ನಿರೀಕ್ಷೆ ಇದೆ.
ಈ ಆಧಾರದಲ್ಲಿ ಕಾಂಗ್ರೆಸ್ನ 22 ಶಾಸಕರಿಗೆ ಟಿಕೆಟ್ ಸಿಗಲಾರದು ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣಾ ರಣತಂತ್ರಗಳನ್ನು ಹೆಣೆಯುತ್ತಿರುವ ಸುನಿಲ್ ಕನಗೋಲು ಅವರು ಸೋಲಬಹುದಾದ 15 ಮಂದಿ ಹಾಲಿ ಕಾಂಗ್ರೆಸ್ ಶಾಸಕರ ಪಟ್ಟಿಯನ್ನು ಕಾಂಗ್ರೆಸ್ನ ದೆಹಲಿ ನಾಯಕರಿಗೆ ರವಾನಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿಯಲ್ಲೂ ಕೆಲವರಿಗೆ ಟಿಕೆಟ್ ಇಲ್ಲ..?
ಕಾಂಗ್ರೆಸ್ಗೆ ಹೋಲಿಸಿದರೆ ಆಡಳಿತರೂಢ ಬಿಜೆಪಿಯಲ್ಲಿ ಈ ರೀತಿ ಟಿಕೆಟ್ ಕೈ ತಪ್ಪಬಹುದಾದ ಹಾಲಿ ಶಾಸಕರ ಸಂಖ್ಯೆ 30ಕ್ಕೂ ಅಧಿಕ.
ಸತತವಾಗಿ ಕ್ಷೇತ್ರದಲ್ಲಿ ಗೆದ್ದಿರುವ ಕಾರಣ ತೀವ್ರ ಸ್ವರೂಪದ ಶಾಸಕ ವಿರೋಧಿ ಅಲೆ ಎದುರಿಸುತ್ತಿರುವ ಶಾಸಕರಿಗೆ ಟಿಕೆಟ್ ಕೈ ತಪ್ಪುವ ನಿರೀಕ್ಷೆ ಇದೆ.
ವಯಸ್ಸಿನ ಕಾರಣದಿಂದಲೂ ಹಲವು ಶಾಸಕರಿಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡದೇ ಇರಬಹುದು ಎಂದು ಮೂಲಗಳು ತಿಳಿಸಿವೆ.
ADVERTISEMENT