ಲೋಕಸಭೆಯಲ್ಲಿ ಭಾರೀ ಭದ್ರತಾಲೋಪ ವಿಚಾರ ಕುರಿತಾಗಿ ಸಂಸದ ಪ್ರತಾಪ್ ಸಿಂಹ ಹೆಸರು ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ಇದೀಗ ಪ್ರತಿಭಟನೆಗಳು ನಡೆಯುತ್ತಿವೆ.
ಮೈಸೂರಿನ ಜಲದರ್ಶಿನಿ ಗೆಸ್ಟ್ ಹೌಸ್ ಆವರಣದಲ್ಲಿರುವ ಪ್ರತಾಪ್ ಸಿಂಹ ಕಚೇರಿಗೆ ಮುತ್ತಿಗೆ ಹಾಕಿದ ಮೈಸೂರು ಗ್ರಾಮಾಂತರ ವಿಭಾಗದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಪ್ರತಾಪ್ ಸಿಂಹ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಸಂಸತ್ ನಲ್ಲಿ ಇಂದು ಬೆಳಗ್ಗೆ ಉಂಟಾದ ಕೋಲಾಹಲಕ್ಕೆ ಸಂಸದ ಪ್ರತಾಪ್ ಸಿಂಹ ನೇರ ಹೊಣೆ ಅಂತ ಆರೋಪಿಸಿದ್ರು. ಅಲ್ಲದೆ ಈ ಕೂಡಲೇ ಪ್ರತಾಪ್ ಸಿಂಹ ಅವರನ್ನು ಸಂಸದ ಸ್ಥಾನದಿಂದ ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು ಮತ್ತು ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಅಂತ ಪ್ರತಿಭಟನಾಕಾರರು ಆಗ್ರಹಿಸಿದರು.