ಕೇಂದ್ರ ಸರ್ಕಾರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತರ್ ಅಬ್ಬಾಸ್ ನಖ್ವಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಗುರುವಾರ ಜೂನ್ 7 ರಂದು ಅವರ ರಾಜ್ಯಸಭಾ ಅವಧಿ ಮುಗಿಯುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ.
ಇಂದು ಬುಧವಾರ ಪ್ರಧಾನಿ ನರೇಂದ್ರ ಮೋದಿಯವರು, ದೇಶದ ಅಭಿವೃದ್ಧಿಯಲ್ಲಿ ಸಚಿವ ಮುಖ್ತರ್ ಅಬ್ಬಾಸ್ ನಖ್ವಿಯವರ ಸಾಧನೆಯನ್ನು ಮೆಚ್ಚಿದ್ದಾರೆ.
ಕ್ಯಾಬಿನೆಟ್ ಸಭೆಯ ನಂತರ ಇವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿಯಾಗಲಿದ್ದಾರೆ.