ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ : ಇಬ್ಬರ ಬಂಧನ

ಪ್ರಿಯಕರನ ಜೊತೆ ಸೇರಿಕೊಂಡು ತನ್ನ ಗಂಡನನ್ನು ಪತ್ನಿಯೇ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಪಾಂಡಪ್ಪ ಜಟಕನ್ನವರ(35) ಮೃತ ವ್ಯಕ್ತಿ. ಈತನ ಪತ್ನಿ ಲಕ್ಷ್ಮಿ ಜಟಕನ್ನವರ ಹೊಸೂರ ಗ್ರಾಮದ ರಮೇಶ್ ಬಡಿಗೇರ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದೇ ಕಾರಣಕ್ಕೆ ಆಗಾಗ ಗಂಡ, ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಕಳೆದ ರಾತ್ರಿ ಪಾಂಡಪ್ಪ ಹಾಗೂ ಲಕ್ಷ್ಮೀ ನಡುವೆ ಇದೇ ವಿಷಯಕ್ಕೆ ಜಗಳವಾಡಿದ್ದು, ಈ ವಿಷಯ ರಮೇಶ್(36)ಗೆ ಲಕ್ಷ್ಮಿ ತಿಳಿಸಿ, ಬಳಿಕ ಗಂಡನನ್ನು ಕೊಲೆ ಮಾಡಲು ತಂತ್ರ ರೂಪಿಸಿದ್ದಾಳೆ.

ಈ ಪ್ರಕಾರವಾಗಿಯೇ ರಮೇಶ್ ಬಡಿಗೇರ ಲಕ್ಷ್ಮಿ ಮನೆಗೆ ಬಂದಿದ್ದ. ಈ ವೇಳೆ ರಮೇಶ್ ಹಾಗೂ ಪಾಂಡಪ್ಪ ಮಧ್ಯೆ ನಡೆದಿದ್ದ ಜಗಳ ವಿಕೋಪಕ್ಕೆ ತಿರುಗಿತ್ತು. ಆಗ ಪಾಂಡಪ್ಪನ ತಲೆಗೆ ಲಕ್ಷ್ಮಿ ಕೃಷಿ ಉಪಕರಣದಿಂದ ಹೊಡೆದಿದ್ದಾಳೆ. ಇದರಿಂದಾಗಿ ಪಾಂಡಪ್ಪನ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಾದ ಬಳಿಕ ಲಕ್ಷ್ಮಿ ತನ್ನ ಪ್ರಿಯಕರನ ಜೊತೆ ಸೇರಿ ಪಾಂಡಪ್ಪ ಜಕ್ಕನವರ ಶವವನ್ನು ಬೈಕ್ ಮೇಲೆ ಹೊತ್ತೊಯ್ದು, ರಾಮದುರ್ಗ ತಾಲೂಕಿನ ಹೊಸೂರು ಹೊರವಲಯದ ಕಿರುಸೇತುವೆ ಬಳಿ ಎಸೆದು, ಅಪಘಾತ ಎಂದು ಬಿಬಿಂಸಲು ಪ್ರಯತ್ನಿಸಿದ್ದರು. ಇದನ್ನೂ ಓದಿ : ಸಿಗದ ನ್ಯಾಯ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಾಲು ಮರದ ವೀರಾಚಾರಿ ಆತ್ಮಹತ್ಯೆ

ಮರುದಿನ ತನ್ನ ಗಂಡ ಮನೆಗೆ ಮರಳಿ ಬಂದಿಲ್ಲ ಎಂದು ನಾಟಕವಾಡಿದ್ದಾಳೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದ ಕಟಕೋಳ ಪೊಲೀಸರು 24 ಗಂಟೆಯೊಳಗಾಗಿಯೇ ಪ್ರಕರಣವನ್ನು ಭೇದಿಸಿದ್ದಾರೆ.

ಲಕ್ಷ್ಮಿ ಮೇಲೆ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಘಟನೆ ಕುರಿತು ಲಕ್ಷ್ಮಿ ಹಾಗೂ ಆಕೆಯ ಪ್ರಿಯಕರ ರಮೇಶ್ ಬಡಿಗೇರನನ್ನು ಬಂಧಿಸಲಾಗಿದೆ.

ಇದನ್ನೂ ಓದಿ : Actress Deepa : ಯುವ ನಟಿ ದೀಪ ಆತ್ಮಹತ್ಯೆ

LEAVE A REPLY

Please enter your comment!
Please enter your name here