ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಮುರುಘಾ ಶ್ರೀ ಗಳ ಜಾಮೀನು ಅರ್ಜಿಯನ್ನು ಗುರುವಾರ ಚಿತ್ರದುರ್ಗ ಕೋರ್ಟ್ ತಿರಸ್ಕರಿಸಿದೆ.
ಜಾಮೀನು ಕೋರಿ ಶ್ರೀಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದೆ. ಇದೇ ಸೆ.27 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಬುಧವಾರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಶಿವಮೊಗ್ಗದಿಂದ ಮತ್ತೆ ಚಿತ್ರದುರ್ಗಕ್ಕೆ ಕರೆತರಲಾಗಿದೆ.
ನ್ಯಾಯಾಲಯದ ಸೂಚನೆ ಮೇರೆಗೆ ಮುರುಘಾ ಶ್ರೀ ಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ರಾತ್ರಿ ಶಿವಮೂರ್ತಿ ಶ್ರೀಗಳನ್ನು ಪೊಲೀಸ್ ವಾಹನದಲ್ಲಿ ಚಿತ್ರದುರ್ಗದ ಕಾರಾಗೃಹದಿಂದ ಶಿವಮೊಗ್ಗ ಕಾರಾಗೃಹಕ್ಕೆ ಕರೆ ತರಲಾಯಿತು. ಬಳಿಕ ಅಲ್ಲಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಆ್ಯಂಜಿಯೋಪ್ಲಾಸ್ಟಿ ಹೃದಯ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ : Shivamoorthy Shree : ಹೃದಯ ಸಂಬಂಧಿ ಖಾಯಿಲೆ ತಪಾಸಣೆ; ಶಿವಮೊಗ್ಗ ಆಸ್ಪತ್ರೆಗೆ ಶಿಫ್ಟ್!