ಸಂಸತ್ತಿನ ಭದ್ರತಾ ಲೋಪ ವಿವಾದಲ್ಲಿ ಸಿಕ್ಕಿಹಾಕಿಕೊಂಡಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಸಹೋದರನ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಮರಗಳ್ಳತನದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಆ ಸಂಬಂಧ ವೀಡಿಯೋವನ್ನೂ ಕೂಡಾ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
ಅಣ್ಣ @mepratap ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ.
ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ.
ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದು ಈ ಬಗ್ಗೆ ಸಚಿವ @eshwar_khandre ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆ. Dear @BJP4Karnataka ನಿಮ್ಮ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ?