ಪಠ್ಯ ಪುಸ್ತಕಗಳಲ್ಲಿ ಭಗತ್ಸಿಂಗ್, ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟಿರುವುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಅಪ್ರತಿಮ ವ್ಯಕ್ತಿತ್ವ ಹೊಂದಿರುವ ವ್ಯಕ್ತಿಗಳ ಮಾಹಿತಿ ಇರುವ ಪಠ್ಯವನ್ನು ಕೈಬಿಟ್ಟಿರುವುದು ಸರಿಯಲ್ಲ. ರಾಜ್ಯ ಸರ್ಕಾರ ಹಾಗೂ ಶಿಕ್ಷಣ ತಜ್ಞರು ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಿ ಕೈಬಿಟ್ಟಿರುವ ವ್ಯಕ್ತಿಗಳ ಪಠ್ಯವನ್ನು ಸೇರಿಸಬೇಕು ಎಂದು ಕೆಪಿಸಿಸಿ ಸಂಯೋಜಕ, ವಕೀಲ ಪದ್ಮಪ್ರಸಾದ್ ಜೈನ್ ಆಗ್ರಹಿಸಿದ್ದಾರೆ.
ರೋಹಿತ್ ಚಕ್ರತೀರ್ಥ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯಲ್ಲ. ಅವರ ಬದಲು ಶಿಕ್ಷಣ ತಜ್ಞರು, ಶಿಕ್ಷಣ ಪ್ರೇಮಿಗಳು, ಉತ್ತಮ ಶಿಕ್ಷಕರನ್ನು ಈ ಹುದ್ದೆಗೆ, ಸಮಿತಿಗೆ ಆಯ್ಕೆ ಮಾಡಬೇಕು. ಇಲ್ಲವಾದಲ್ಲಿ ಇಂತಹ ಪ್ರಮಾದಗಳು ನಡೆಯುತ್ತಿರುತ್ತವೆ ಎಂದೂ ಅವರು ಹೇಳಿದ್ದಾರೆ.
ಮಂಗಳೂರಲ್ಲಿ ಮಾತಾಡಿದ ಅವರು, 15 ದಿನಗಳ ಮುಂಚೆಯೇ ಶಾಲೆಗಳು ಪುನರ್ ಆರಂಭಗೊAಡಿವೆ. ಶಾಲೆಗಳಲ್ಲಿ ತಳಿರು ತೋರಣಗಳಿಂದ ಸಿಂಗರಿಸಲಾಗಿದೆಯೇ ಹೊರತು ಮಕ್ಕಳಿಗೆ ಶಾಲೆ ಪ್ರಾರಂಭವಾಗುವ ವೇಳೆ ಸಮವಸ್ತ್ರ, ಪಠ್ಯ ಪುಸ್ತಕಗಳನ್ನು ಒದಗಿಸಲು ಸರಕಾರಕ್ಕೆ ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.
ಮೂಡುಬಿದಿರೆ ನಗರದ ಕೇಂದ್ರ ಪ್ರದೇಶದಲ್ಲಿ ಸರಕಾರಿ ಪಿಯು ಕಾಲೇಜಿನ ಅಗತ್ಯವಿದೆ. ಮೂಡುಬಿದಿರೆಯಲ್ಲಿ ಕಡಿಮೆ ವಿದ್ಯಾರ್ಥಿಗಳ ಸಂಖ್ಯೆಗಳಿರುವ ಯಾವುದಾದರೂ ಶಾಲೆಯನ್ನು ಆಯ್ಕೆ ಮಾಡಿ ಅಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸರ್ಕಾರಿ ಪಿಯು ಪಿಯು ಕಾಲೇಜನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.