ಸೌಜನ್ಯಕ್ಕಾದರೂ ತಿಳಿಸಿಲ್ಲ – ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ನರೇಂದ್ರ ರೈ ದೇರ್ಲ

ಟ್ರಸ್ಟ್ ಮತ್ತು ಪ್ರತಿಷ್ಠಾನಕ್ಕೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿರುವ ರಾಜ್ಯ ಸರ್ಕಾರ ನೇಮಕಾತಿಗೂ ಮೊದಲು ಸಂಬಂಧಪಟ್ಟವರ ಬಳಿ ಕನಿಷ್ಠ ಸೌಜನ್ಯಕ್ಕಾದರೂ ಸಮಾಲೋಚಿಸಿಲ್ಲ.

ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ತಮ್ಮನ್ನು ನೇಮಕಗೊಂಡಿರುವ ನರೇಂದ್ರ ರೈ ದೇರ್ಲ ಅವರು ಬರೆದುಕೊಂಡಿದ್ದಾರೆ.

ನರೇಂದ್ರ ರೈ ದೇರ್ಲ ಅವರ ಲೇಖನ;

ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ‘ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ’ದ ಅಧ್ಯಕ್ಷನನ್ನಾಗಿ ನನ್ನನ್ನು ನೇಮಕ ಮಾಡಿದ ಸುದ್ದಿ ಮಾಧ್ಯಮಗಳ ಮೂಲಕ ನನಗೆ ತಿಳಿಯಿತು.

ತೇಜಸ್ವಿ ಅವರ ಒಡನಾಟ ಮತ್ತು ಅವರ ಕುರಿತು ಒಂದಷ್ಟು ಬರವಣಿಗೆ ಅವರ ಪತ್ರಗಳ ಸಂಪಾದನೆಯನ್ನು ನಾನು ಮಾಡಿರುವುದು ನಿಜ.

ಈ ಕಾರಣಕ್ಕಾಗಿಯೇ ಸರಕಾರ ನನ್ನನ್ನು ಆಯ್ಕೆ ಮಾಡಿದೆ ಎಂದು ಅನೇಕ ಸ್ನೇಹಿತರು, ಬಂಧುಗಳು, ತೇಜಸ್ವಿ ಓದುಗರು ಅಭಿನಂದಿಸಿ ನನಗೆ ಸಂದೇಶ ಕಳಿಸಿದ್ದಾರೆ. ಈ ಕುರಿತು ಘನ ಸರಕಾರಕ್ಕೂ ನನ್ನ ಧನ್ಯವಾದಗಳು .

ಆದರೆ ವೈಯಕ್ತಿಕ ಕಾರಣಗಳಿಂದಾಗಿ ಸಂಬಂಧಿಸಿದ ಜವಾಬ್ದಾರಿಯನ್ನು ನಾನು ಸ್ವೀಕರಿಸುವುದಿಲ್ಲ .

ಈ ಕುರಿತು ಸಂಬಂಧಿಸಿದ ಯಾವುದೇ ಇಲಾಖೆಯ ವ್ಯಕ್ತಿಗಳು, ಅಧಿಕಾರಿಗಳು ನನ್ನನ್ನು ಈವರೆಗೆ ಸಂಪರ್ಕಿಸಿಯೂ ಇಲ್ಲ .ಅಂತಹ ಪತ್ರ- ಆದೇಶ ನನಗೆ ಬಂದಿಲ್ಲ. ಒಂದು ವೇಳೆ ಅದು ಬಂದಾಗಲೂ ನನ್ನ ಈ ಅಭಿಪ್ರಾಯ ಬದಲಾಗುವುದಿಲ್ಲ.

ದಯವಿಟ್ಟ ಯಾರೂ ಕೂಡಾ ಇದನ್ನು ನನ್ನ ಅಹಂ, ಉದ್ದಟತನವೆಂದು ಭಾವಿಸಬಾರದು .ಇಂಥ ಸರಳ ಸೌಜನ್ಯ- ನಿರಾಕರಣೆಗೆ ನನಗೆ ತೇಜಸ್ವಿ ಅವರೇ ಸ್ಪೂರ್ತಿ. ಸರಕಾರ ಮುಂದೆ ಯಾರನ್ನೇ ಬೇಕಾದರೂ ಆಯ್ಕೆ ಮಾಡಲಿ, ತೇಜಸ್ವಿಯ ವಿಚಾರದಲ್ಲಿ ಅವರಿಗೆ ನನ್ನ ಸಹಾಯ ಇದ್ದೇ ಇದೆ.

ಆದರೆ ಇಂಥ ಪ್ರತಿಷ್ಠಾನ ಪ್ರಾಧಿಕಾರ ಅಕಾಡೆಮಿಗಳಿಗೆ ನೇಮಕ ಮಾಡುವಾಗ ಸೌಜನ್ಯಕ್ಕಾದರೂ ಅವರನ್ನು ಸಂಪರ್ಕಿಸಿ ಪೂರ್ವಾನುಮತಿಯನ್ನು ಪಡೆಯುವುದು ಹೆಚ್ಚು ಸೂಕ್ತ. ಆಗ ಅನಪೇಕ್ಷಿತ ಮುಜುಗರವೂ ತಪ್ಪುತ್ತದೆ .

ದಯವಿಟ್ಟು ಸಂಸ್ಕೃತಿ ಇಲಾಖೆ ಇದನ್ನು ಗಮನಿಸಬೇಕೆಂದು ವಿನಮ್ರ ಕೋರಿಕೆ.

LEAVE A REPLY

Please enter your comment!
Please enter your name here