ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ನಿಂದನೆ – ಪತ್ರಕರ್ತ ವಿಶ್ವೇಶ್ವರ ಭಟ್​ಗೆ ನೋಟಿಸ್​

ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರ ಬಗ್ಗೆ ತಮ್ಮ ಲೇಖನದಲ್ಲಿ ಅವಹೇಳನಕಾರಿಯಾಗಿ ಪದ ಬಳಸಿದ್ದ ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್​ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್​ ಜಾರಿ ಮಾಡಿದೆ.
ಅಕ್ಟೋಬರ್​ 26ರಂದು ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಆಯೋಗ ಸೂಚಿಸಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನಿಂದಿಸಿದ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂಪಾದಕ ವಿಶ್ವೇಶ್ವರ ಭಟ್​ ವಿರುದ್ಧ ದೂರು ಸಲ್ಲಿಕೆ ಆಗಿತ್ತು.