ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಕೋರಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಲಾಗಿದೆ. ದೇಶಾದ್ಯಂತ ಕೊವಿಡ್ ಆರ್ಭಟ ಮತ್ತೆ ಶುರುವಾಗಿದ್ದು, ರಾಜ್ಯದಲ್ಲೂ ಸೋಂಕು ಹರಡುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ವಕೀಲ ಅಮತೇಶ್ ಎಂಬುವರು ಹೈಕೋರ್ಟ್ ಗೆ ಪಿಐಎಲ್ ಮನವಿ ಸಲ್ಲಿಸಿದ್ದಾರೆ.
ಹೊಸ ವರ್ಷಾಚರಣೆಗಾಗಿ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕಮರ್ಷಿಯಲ್ ಸ್ಟ್ರೀಟ್ಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಅಲ್ಲದೆ ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಬರುವ ಸಾಧ್ಯತೆಯಿದ್ದು ಸೋಂಕು ಹರಡೋ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಲು ಮನವಿ ಮಾಡಲಾಗಿದೆ.
ಇನ್ನು ಕೊರೊನಾ ಭೀತಿಯಿಂದಾಗಿ ಈ ಬಾರಿಯೂ ಕೂಡ ವರ್ಷಾಚರಣೆಗೆ ನಿರ್ಬಂಧ ವಿಧಿಸಬೇಕೆ ಬೇಡವೇ ಎಂಬ ಕುರಿತಾಗಿ ಸಾಕಷ್ಟು ಚರ್ಚೆಗಳು ನಡೀತಿವೆ. ಆದರೆ ಬಿಬಿಎಂಪಿ, ಗೃಹ ಇಲಾಖೆ, ಆರೋಗ್ಯ ಇಲಾಖೆ ಸಭೆ ಮಾಡಿದ್ದು, ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಭಂಧವಿಲ್ಲ ಎಂದು ಹೇಳಿದೆ.