ಹೊಸ ವರ್ಷಾಚರಣೆ ಹೊತ್ತಲ್ಲಿ ಬೆಂಗಳೂರು ಸಮೀಪದಲ್ಲಿರುವ ನಂದಿಬೆಟ್ಟಕ್ಕೆ ಪ್ರವಾಸಿಗರು ಭೇಟಿ ನೀಡುವಂತಿಲ್ಲ. ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಚಿಕ್ಕಬಳ್ಳಾಪುರದ ನಂದಿಬೆಟ್ಟಕ್ಕೆ ಹೊಸ ವರ್ಷಾಚರಣೆಯ ಸಂದರ್ಭ ಪ್ರವಾಸಿಗರು, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಗಿರಿಧಾಮದಲ್ಲಿನ ಅತಿಥಿಗೃಹಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸುವುದನ್ನು ರದ್ದುಗೊಳಿಸಲಾಗಿದೆ
ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶದಲ್ಲಿ ತಿಳಿಸಿದ್ದಾರೆ
ADVERTISEMENT
ADVERTISEMENT