ನಾಳೆಯೇ ನೂತನ ಸಿಎಂ ಪ್ರಮಾಣವಚನ….!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬಳಿಕ ನೂತನ ಸಿಎಂ ಆಯ್ಕೆಗಾಗಿ ಭಾರೀ ಕಸರತ್ತುಗಳು ನಡೆಯುತ್ತಿದೆ. ದೆಹಲಿ ಮತ್ತು ಬೆಂಗಳೂರಿನಲ್ಲೂ ಹಲವು ಸಭೆಗಳು ನಡೆಯುತ್ತಿದ್ದು, ಮುಂದಿನ ಸಿಎಂ ಯಾರಾಗಬಹುದು ಎಂಬ ಕುತೂಹಲ ಮಾತ್ರ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ.

ಗುರುವಾರ ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಬಹುದು ಎಂದು ಅಂದಾ…!ಜಿಸಲಾಗಿತ್ತು. ಆದರೆ ಇಂದಿನ ಬೆಳವಣಿಗೆಗಳ ಬಳಿಕ ಇಂದು ಸಂಜೆಯೇ ನೂತನ ಸಿಎಂ ಹೆಸರನ್ನು ಪ್ರಕಟ ಮಾಡುವ ಸಾಧ್ಯತೆ ಹೆಚ್ಚಿದೆ.

ಇದಕ್ಕೆ ಪುಷ್ಠಿ ನೀಡುವಂತೆ ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯಪಾಲರ ಕಚೇರಿಯಿಂದ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ ಎಂದು ವರದಿಯಾಗಿದೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ ಮತ್ತು ದೆಹಲಿಗೆ ತೆರಳಿದ್ದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಸಂಜೆ ನಗರದ ಖಾಸಗಿ ಹೋಟೆಲ್ ನಲ್ಲಿ ಶಾಸಕಾಂಗ ಸಭೆ ಏರ್ಪಡಿಸಲಾಗಿದೆ. ಅಲ್ಲಿಯೇ ನೂತನ ಸಿಎಂ ಆಯ್ಕೆ ನಡೆಯಲಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here