ವಿಧಾನಸಭೆ ಚುನಾವಣೆಗೆ ನಿಖಿಲ್ ಸ್ಪರ್ಧಿಸಲ್ಲ : ಹೆಚ್​ಡಿ ಕುಮಾರಸ್ವಾಮಿ

Nikhil, HD Kumaraswamy

ಮುಂದೆ ಬರುವ 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸ್ಪರ್ಧೆ ಮಾಡಲ್ಲ ಎಂದು ಜೆಡಿಎಸ್​ ನಾಯಕ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮುಂದಿನ ವಿಧಾನಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಮನಗರದಿಂದ ಕಣಕ್ಕಿಳಿಯುತ್ತಾರೆ ಎನ್ನುವ ಬಗ್ಗೆ ಸುದ್ದಿ ಹರಿದಾಡುತ್ತಿತ್ತು.

ಇದನ್ನೂ ಓದಿ : Breaking : 19 ಜನ ರಾಜ್ಯಸಭಾ ಸಂಸದರ ಅಮಾನತು – Pratikshana News

ಇಂದು ಈ ಬಗ್ಗೆ ಮಂಡ್ಉ ಜಿಲ್ಲೆಯ ಮದ್ದೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸುವುದಿಲ್ಲ. ಸದ್ಯ ನಿಖಿಲ್ ಕುಮಾರಸ್ವಾಮಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ.

ನಿಖಿಲ್ ಯಾವುದೇ ಕಾರಣಕ್ಕೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಅವರು 20 ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಿ, ಪಕ್ಷ ಅಧಿಕಾರ ತರಲು ಶ್ರಮಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here